SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಚಿರತೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಸಚಿವ ರಘುಮೂರ್ತಿ ಸಾಂತ್ವನ

ಚಿರತೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಸಚಿವ ರಘುಮೂರ್ತಿ ಸಾಂತ್ವನ

0
8

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯ ದೊಡ್ಡಚೆಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಚಂದ್ರಪ್ಪ ಮೃತಪಟ್ಟಿರುವ ವಿಷಯ ತಿಳಿದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ನಂತರ ಮೃತರ ನಿವಾಸಕ್ಕೆ ಭೇಟಿ ನೀಡಿ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.

ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಕಾರ್ಯಾಚರಣೆ ಕೈಗೊಂಡು ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯಬೇಕು ಎಂದು ಸೂಚಿಸಿದರು.

ಮೃತ ಚಂದ್ರಪ್ಪ ಅವರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಪರಿಹಾರವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರ ಜೀವ ಮತ್ತು ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.