ಹಾವೇರಿ: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಹಿನ್ನೆಲೆ ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶ್ರೀಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಮುರುಘಾ ಶ್ರೀಗಳನ್ನ ಹಾವೇರಿ ಬಂಕಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ ಎನ್ನಲಾಗಿದೆ.
ಬಂಧನದ ಭೀತಿಯಲ್ಲಿದ್ದ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಪ್ರತಿಕ್ರಿಯಿಸುತ್ತಿಲ್ಲ.
ಅಪ್ರಾಪ್ತ ಬಾಲಕೀಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

























