SK Home Ad
Home ನಮ್ಮ ಜಿಲ್ಲೆ ಬಳ್ಳಾರಿ ಬಳ್ಳಾರಿ ಆರ್‌ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ ಆರ್‌ಟಿಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

0
102

ಆರ್‌ಟಿಓ ಕಚೇರಿಯಲ್ಲಿ ಬೆಳಿಗ್ಗೆಯಿಂದ ಕಡತ, ದಾಖಲೆಗಳ ಪರಿಶೀಲನೆ; ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಬಳ್ಳಾರಿ: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಓ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯ ಕಡತ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರಿನ ಲೋಕಾಯುಕ್ತ ಡಿವೈಎಸ್ಪಿ ಶ್ರೀನಿವಾಸ ನೇತೃತ್ವದ ತಂಡ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಆರ್‌ಟಿಓ ಕಚೇರಿಯಲ್ಲಿ ಪರಿಶೀಲನೆ ಆರಂಭಿಸಿದೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಅಧಿಕಾರಿಗಳು ಕಚೇರಿಯ ವಿವಿಧ ವಿಭಾಗಗಳಲ್ಲಿ ಇಂಚಿಂಚೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಚೇರಿಯಲ್ಲಿರುವ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಸಿಬ್ಬಂದಿಯಿಂದಲೂ ಅಗತ್ಯ ಮಾಹಿತಿ ಪಡೆಯುತ್ತಿದ್ದಾರೆ.

ಬೆಳಿಗ್ಗೆಯಿಂದಲೇ ನಡೆಯುತ್ತಿರುವ ಲೋಕಾಯುಕ್ತ ಪರಿಶೀಲನೆಯಿಂದ ಆರ್‌ಟಿಓ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಯಾವ ಅಂಶಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂಬುದು ಪರಿಶೀಲನೆ ಪೂರ್ಣಗೊಂಡ ಬಳಿಕ ತಿಳಿದುಬರಬೇಕಿದೆ.