SK Home Ad
Home ನಮ್ಮ ಜಿಲ್ಲೆ ಯಾದಗಿರಿ ಬಸವಸಾಗರ ಕಾಲುವೆಗಳಿಗೆ ನ.30ರವರೆಗೆ ನೀರು ಹರಿಸುವಂತೆ ಆಗ್ರಹಿಸಿ ಯಾದಗಿರಿ ಬಂದ್‌ : ಮಿಶ್ರ ಪ್ರತಿಕ್ರಿಯೆ

ಬಸವಸಾಗರ ಕಾಲುವೆಗಳಿಗೆ ನ.30ರವರೆಗೆ ನೀರು ಹರಿಸುವಂತೆ ಆಗ್ರಹಿಸಿ ಯಾದಗಿರಿ ಬಂದ್‌ : ಮಿಶ್ರ ಪ್ರತಿಕ್ರಿಯೆ

0
40
ನವೆಂಬರ್ 30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹ; ಯಾದಗಿರಿಯಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನಿರಂತರ ನೀರು ಬಿಡಿ; ಯಾದಗಿರಿ ಬಂದ್‌ಗೆ ಮಿಶ್ರ ಸ್ಪಂದನೆ

ಯಾದಗಿರಿ : ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಒತ್ತಾಯಿಸಿ ಮಾಜಿ ಸಚಿವ ರಾಜೂಗೌಡ ಅವರ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ ಹಾಗೂ ಸಾರ್ವಜನಿಕ ಸಂಘಟನೆಗಳು ಕರೆ ನೀಡಿದ್ದ ಯಾದಗಿರಿ ಬಂದ್‌ಗೆ ಶುಕ್ರವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೇ ಬಂದ್‌ ಚಟುವಟಿಕೆಗಳು ಚುರುಕುಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳಲ್ಲಿನ ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದವು. ಇದರಿಂದ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ ವಹಿವಾಟು ಸ್ಥಾಗಿತತ್ತು ಸ್ಥಗಿತಗೊಂಡಿತ್ತು.

ಬೆಳಗ್ಗೆಯೇ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳಲ್ಲಿ ಜಮಾಯಿಸೆ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನಾಕಾರರು ಬಂದ್ ಗೆ ಬೆಂಬಲ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ರೈತರ ಹಿತದೃಷ್ಟಿಯಿಂದ ಹೋರಾಟ ಬಸವಸಾಗರ ಜಲಾಶಯದ ಕಾಲುವೆಗಳಿಗೆ ಸಮರ್ಪಕವಾಗಿ ಹಾಗೂ ನಿರಂತರವಾಗಿ ನೀರು ಹರಿಸದಿದ್ದರೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಲೆದೆ ಎಂಬ ಆತಂಕ ರೈತರಲ್ಲಿದೆ. ಈಗಾಗಲೇ ಕೃಷಿ ಚಟುವಟಿಕೆಗಳು ನೀರಿನ ಲಭ್ಯತೆಯ ಮೇಲೆ ಅವಲಂಬಿತವಾಗಿದ್ದು, ಬೆಳೆಗಳ ರಕ್ಷಣೆ ಹಾಗೂ ರೈತರ ಬದುಕಿನ ಹಿತದೃಷ್ಟಿಯಿಂದ ನವೆಂಬರ್ 30ರವರೆಗೆ ಕಾಲುವೆಗಳಿಗೆ ನೀರು ಹರಿಸುವುದು ಅತ್ಯಗತ್ಯವಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಿಜೆಪಿ ಮುಖಂಡರು ಸೇರಿದಂತೆ ವರ್ತಕರು ಹಾಗೂ ಯುವಕರು ಭಾಗವಹಿಸಿದ್ದರು.