ಘಟಪರ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಬಿಇಒ ಚಾಲನೆ; ಮಕ್ಕಳ ಕಲಾ ಪ್ರದರ್ಶನಕ್ಕೆ ಮೆಚ್ಚುಗೆ
ಚಳ್ಳಕೆರೆ:ಗ್ರಾಮೀಣ ಭಾಗದ ಶಾಲಾ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರ ಕಲಾ ಕೌಶಲ್ಯಗಳನ್ನು ಪ್ರೋತ್ಸಾಹಿಸಲು ಶಿಕ್ಷಣ ಇಲಾಖೆ ಆಯೋಜಿಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೇದಿಕೆಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.
ತಾಲ್ಲೂಕಿನ ಘಟಪರ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದುದ್ದಕ್ಕೂ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲೆಯ ಮಕ್ಕಳು ಪ್ರದರ್ಶಿಸಿದ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಬೌದ್ಧಿಕ ಸ್ಪರ್ಧೆಗಳನ್ನು ಆಸಕ್ತಿಯಿಂದ ವೀಕ್ಷಿಸಿದರು. ವಿದ್ಯಾರ್ಥಿಗಳ ಅದ್ಭುತ ಕಲಾ ಪ್ರದರ್ಶನ ಹಾಗೂ ಪ್ರತಿಭೆಗೆ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸ್ಪರ್ಧೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳನ್ನು ಆತ್ಮೀಯವಾಗಿ ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವಂತೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಸಿ.ಟಿ. ವೀರೇಶ್ ಮಾತನಾಡಿ,ಪ್ರತಿಭಾ ಕಾರಂಜಿಯು ಕೇವಲ ಸ್ಪರ್ಧೆಯಲ್ಲ, ಇದೊಂದು ಗ್ರಾಮೀಣ ಮಕ್ಕಳ ಸಾಂಸ್ಕೃತಿಕ ಹಬ್ಬವಾಗಿದೆ. ವಿದ್ಯಾರ್ಥಿಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೆ ಆಸಕ್ತಿಯಿಂದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದೇ ಬಹುದೊಡ್ಡ ಸಾಧನೆಯಾಗಿದೆ. ನಮ್ಮ ಸರ್ಕಾರಿ ಶಾಲಾ ಶಿಕ್ಷಕರು ಕೇವಲ ನಾಲ್ಕು ಗೋಡೆಗಳ ಮಧ್ಯೆ ಪಾಠ ಮಾಡುವುದಕ್ಕಷ್ಟೇ ಸೀಮಿತರಾಗಿಲ್ಲ; ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಮತ್ತು ಅವರಲ್ಲಿನ ಕಲೆಯನ್ನು ಗುರುತಿಸಲು ಹೆತ್ತವರಿಗಿಂತ ಹೆಚ್ಚಾಗಿ ಕಾಳಜಿ ವಹಿಸಿ ಶ್ರಮಿಸುತ್ತಿದ್ದಾರೆ,ಎಂದು ಶಿಕ್ಷಕರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮಂಜು ಬಾಬು, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಸಣ್ಣಸೂರಮ್ಮ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಘಟಪರ್ತಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಸಹಶಿಕ್ಷಕರು, ಸಿಬ್ಬಂದಿ ವರ್ಗ, ಊರಿನ ಮುಖಂಡರು, ಗ್ರಾಮಸ್ಥರು ಹಾಗೂ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
- E20 ಹೆಸರಿನಲ್ಲಿ ಶೇ. 31ರಷ್ಟು ಎಥೆನಾಲ್ ಕಲಬೆರಕೆ?: ಪೆಟ್ರೋಲ್ ಟೆಸ್ಟ್ ಬೆನ್ನಲ್ಲೇ ತೈಲ ಕಂಪನಿಗಳ ವಿರುದ್ಧ ಸಚಿವ ರಿಜ್ವಾನ್ ಅರ್ಷದ್ ಗರಂ!
- ಕರ್ಮಭೂಮಿ ಎಕ್ಸ್ಪ್ರೆಸ್ನ 4 ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಪಾರು
- ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವ
- ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ ಉತ್ತಮ ವೇದಿಕೆ
- ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜಾಗೃತಿಯೇ ಪ್ರಮುಖ ಅಸ್ತ್ರ






















