ದಾಂಡೇಲಿ (ಉತ್ತರ ಕನ್ನಡ) ಸಂ.ಕ. ಸಮಾಚಾರ: ಮಕ್ಕಳೇ ನಾಡಿನ ಭವಿಷ್ಯದ ಭರವಸೆಯ ಬೆಳಕು. ಅವರ ಪೌಷ್ಟಿಕತೆ, ಆರೋಗ್ಯ, ಶಿಕ್ಷಣ ಹಾಗೂ ಸುರಕ್ಷಿತ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಅವರು ಇಂದು ದಾಂಡೇಲಿ ನಗರದ ವಿವಿಧ ನಾಲ್ಕು ವಾರ್ಡ್‌ಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಅನುದಾನದಡಿ ನಿರ್ಮಿಸಲಾದ ನಾಲ್ಕು ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಗುಣಮಟ್ಟದ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಅಂಗನವಾಡಿ ಕೇಂದ್ರಗಳು ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವುಗಳ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ : ಇದೇ ಸಂದರ್ಭದಲ್ಲಿ ಸಿ.ಎಂ.ಐ.ಡಿ. ಯೋಜನೆಯಡಿ ಅಂಬಿಕಾನಗರ–ದಾಂಡೇಲಿ ರಸ್ತೆಯ ಆಯ್ದ ಭಾಗಗಳ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗೆ ಶಾಸಕ ಆರ್.ವಿ. ದೇಶಪಾಂಡೆ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸಯ್ಯದ್, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
- E20 ಹೆಸರಿನಲ್ಲಿ ಶೇ. 31ರಷ್ಟು ಎಥೆನಾಲ್ ಕಲಬೆರಕೆ?: ಪೆಟ್ರೋಲ್ ಟೆಸ್ಟ್ ಬೆನ್ನಲ್ಲೇ ತೈಲ ಕಂಪನಿಗಳ ವಿರುದ್ಧ ಸಚಿವ ರಿಜ್ವಾನ್ ಅರ್ಷದ್ ಗರಂ!
- ಕರ್ಮಭೂಮಿ ಎಕ್ಸ್ಪ್ರೆಸ್ನ 4 ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಪಾರು
- ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವ
- ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ ಉತ್ತಮ ವೇದಿಕೆ
- ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜಾಗೃತಿಯೇ ಪ್ರಮುಖ ಅಸ್ತ್ರ





















