ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಕೃಪಾ ಆಳ್ವಾ ಸಿಸಿಬಿ ಸೈಬರ್ ಕ್ರೈಂ ಪೊಲೀಸರ ವಿಚಾರಣೆ ಎದುರಿಸಿದರು.
ನೋಟಿಸ್ ಹಿನ್ನೆಲೆಯಲ್ಲಿ ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಸಮೇತ ವಿಚಾರಣೆಗೆ ಹಾಜರಾದ ಅವರನ್ನು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದ ಬಳಿಕ ಅವರು ವಿಚಾರಣೆಗೆ ಹಾಜರಾಗಿದ್ದು, ನವೆಂಬರ್ 11ರಂದು ಮತ್ತೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಕೃಪಾ ಆಳ್ವಾ ಪರ ವಕೀಲೆ ನಿಖಿತಾ, ಈಗಾಗಲೇ ಡಿಸಿಪಿ ಎದುರು ಎರಡು ಬಾರಿ ಹೇಳಿಕೆ ದಾಖಲಿಸಲಾಗಿದೆ. ಇಂದು ಅಧಿಕೃತವಾಗಿ ಹೇಳಿಕೆ ನೀಡಲು ನೋಟಿಸ್ ನೀಡಿದ್ದರಿಂದ ಹಾಜರಾಗಿದ್ದಾರೆ. ನಿರೀಕ್ಷಣಾ ಜಾಮೀನು ದೊರೆತ ಬಳಿಕ ಕೃಪಾ ಆಳ್ವಾ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.





















