SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಾಂತರ; 41ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಅವಾಂತರ; 41ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

0
5

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿಯನ್ನು ಬೆಣ್ಣೆನಗರಿ ದಾವಣಗೆರೆಯಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದರೆ, ಮತ್ತೊಂದೆಡೆ ಪಟಾಕಿ ಸಿಡಿಸುವ ವೇಳೆ 41ಕ್ಕೂ ಹೆಚ್ಚು ಮಕ್ಕಳು ಸಣ್ಣಪುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ.

ಪಟಾಕಿ ಸಿಡಿಸುವಾಗ ಕಿಡಿ ತಗುಲಿ ಮಕ್ಕಳು ಗಾಯಗೊಂಡಿದ್ದು, ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆ, ನಯನ ಆಸ್ಪತ್ರೆ ಹಾಗೂ ಸೃಷ್ಟಿ ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ 12, ನಯನ ಆಸ್ಪತ್ರೆಯಲ್ಲಿ ಒಬ್ಬರು ಹಾಗೂ ಸೃಷ್ಟಿ ಕಣ್ಣಿನ ಆಸ್ಪತ್ರೆಯಲ್ಲಿ 20 ಮಕ್ಕಳು ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪಟಾಕಿ ಸಿಡಿತದಿಂದ ಗಾಯಗೊಂಡ 12 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಇಬ್ಬರಿಗೆ ಕಣ್ಣಿಗೆ ಕಿಡಿ ತಗುಲಿರುವ ಪ್ರಕರಣಗಳಾಗಿವೆ. ಅದೃಷ್ಟವಶಾತ್ ಯಾವುದೇ ಗಂಭೀರ ಸ್ವರೂಪದ ಗಾಯಗಳು ಸಂಭವಿಸಿಲ್ಲ. ಯಾರನ್ನೂ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಿಸಿಕೊಂಡಿಲ್ಲ. ಗಾಯಾಳುಗಳಿಗೆ ಹೊರರೋಗಿ ವಿಭಾಗದಲ್ಲಿಯೇ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಬಿ.ಎಂ. ನಾಗೇಂದ್ರಪ್ಪ ತಿಳಿಸಿದ್ದಾರೆ.