SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ RSS ಕಾರ್ಯಕರ್ತಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ

RSS ಕಾರ್ಯಕರ್ತಗೆ ರೇಷ್ಮೆ ಅಭಿವೃದ್ಧಿ ನಿಗಮ ನಿರ್ದೇಶಕ ಸ್ಥಾನ

0
32
ಬಿಜೆಪಿ ನಗರ ಮಂಡಲದ ಮಾಜಿ ಅಧ್ಯಕ್ಷನಿಗೆ ಕಾಂಗ್ರೆಸ್ ಸರ್ಕಾರದಿಂದ ನಿಗಮದ ನಿರ್ದೇಶಕ ಸ್ಥಾನ!

ಕಾಂಗ್ರೆಸ್ ನೇಮಕಾತಿ ಪಟ್ಟಿಯಲ್ಲಿ ಬಿಜೆಪಿ ಹಿನ್ನೆಲೆಯ ವ್ಯಕ್ತಿಗೆ ಮಣೆ: ನಿರ್ದೇಶಕ ಸ್ಥಾನ ತಿರಸ್ಕರಿಸಲು ಠಾಕೂರ್ ಚಿಂತನೆ?

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ಘೋಷಿಸಿದ ನಿಗಮ-ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ, ಬಿಜೆಪಿ ನಗರ ಮಂಡಲ ಮಾಜಿ ಅಧ್ಯಕ್ಷ ಲೀಲಾಧರ ಠಾಕೂರ್ ಅವರಿಗೆ ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನ ನೀಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ನಿನ್ನೆ ಸರ್ಕಾರ ಘೋಷಿಸಿದ ಪಟ್ಟಿಯಲ್ಲಿ ಚಿತ್ರದುರ್ಗದ ಲೀಲಾಧರ ಠಾಕೂರ್ ಅವರ ಹೆಸರು ಇದೆ. ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಠಾಕೂರ್, ಮೂಲತಃ ಆರ್‌ಎಸ್‌ಎಸ್ ಹಿನ್ನೆಲೆಯವರು. ಇದೀಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರ ಆಪ್ತರಾಗಿರುವ ಠಾಕೂರ್ ಅವರಿಗೆ ಈ ಸ್ಥಾನ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಠಾಕೂರ್ ಹೆಸರು ಘೋಷಣೆಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಮಡುಗಟ್ಟಿದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ವಿರೋಧ ಪಕ್ಷದ ಹಿನ್ನೆಲೆಯವರಿಗೆ ಸ್ಥಾನ ನೀಡಿದ್ದು ಎಷ್ಟು ಸರಿ ಎಂದು ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನ ತಿರಸ್ಕರಿಸುವ ಬಗ್ಗೆ ಲೀಲಾಧರ ಠಾಕೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.