ಬೆಂಗಳೂರು: ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬಂದಿಳಿದರು.
ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಾದ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಮಂತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಉದ್ಯಮಗಳು ಹಾಗೂ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಸೇರಿದಂತೆ ಸಂಸದರು, ಶಾಸಕರು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರು ಬೆಂಗಳೂರು ಮತ್ತು ಮೈಸೂರಿನಲ್ಲಿ ನಿಗದಿಯಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.





















