SK Home Ad
Home ನಮ್ಮ ಜಿಲ್ಲೆ ಧಾರವಾಡ ನಾಳೆ ಹುಬ್ಬಳ್ಳಿ-ಧಾರವಾಡದಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

ನಾಳೆ ಹುಬ್ಬಳ್ಳಿ-ಧಾರವಾಡದಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ

0
43

ಹುಬ್ಬಳ್ಳಿ: ನಾಳೆ ( ನ.15ರಂದು ಭಾನುವಾರ ) ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ನಡೆಯಲಿರುವ ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಭೂಷಣ್ ಜಿ. ಬೋರಸೆ ಆದೇಶಿಸಿದ್ದಾರೆ.

ನಗರದಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದಿದ್ದಾರೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳು, ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸಲು ಅನುಮತಿ ಇರುವುದಿಲ್ಲ. ಪರೀಕ್ಷೆಯಲ್ಲಿ ಅಕ್ರಮ ತಡೆಯಲು ಹಾಗೂ ಸುವ್ಯವಸ್ಥಿತವಾಗಿ, ಅಡೆತಡೆಯಿಲ್ಲದೆ ಪರೀಕ್ಷೆ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾರ್ಥಿಗಳು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಭೂಷಣ್ ಜಿ ಬೋರಸೆ ಮನವಿ ಮಾಡಿದ್ದಾರೆ.