Home ನಮ್ಮ ಜಿಲ್ಲೆ ಧಾರವಾಡ ಏಳನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಸರ್ಕಾರ ಸಿದ್ಧ: ಮುಖ್ಯಮಂತ್ರಿ

ಏಳನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಸರ್ಕಾರ ಸಿದ್ಧ: ಮುಖ್ಯಮಂತ್ರಿ

0
188
CM

ಹುಬ್ಬಳ್ಳಿ: ಏಳನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳನೇ ವೇತನ ಆಯೋಗ ರಚನೆ ಮಾಡಿದ್ದು, ಆಯೋಗ ವರದಿ ನೀಡಲಿದೆ. ಮದ್ಯಂತರ ವರದಿ ಪಡೆದು ಜಾರಿಗೆ ಸರ್ಕಾರಿ ನೌಕರರ ಸಂಘದ ಮುಖಂಡರು ಕೋರಿದ್ದಾರೆ. ಅದಕ್ಕೂ ನಾವು ಒಪ್ಪಿದ್ದೇವೆ. ಅಯೋಗಕ್ಕೂ ಮಧ್ಯಂತರ ವರದಿ ನೀಡಲು ಸೂಚಿಸಲಾಗಿದೆ. ವರದಿ ಕೊಟ್ಟ ತಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಮುಖಂಡರೊಂದಿಗೆ ನಮ್ಮ ಹಿರಿಯ ಅಧಿಕಾರಿಗಳು ನಿರಂತರ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.