SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ ಗಲಾಟೆ, ಕೊಲೆ ಪ್ರಕರಣ: 7ನೇ ಆರೋಪಿ ಅರೆಸ್ಟ್‌

ದಾವಣಗೆರೆ ಗಲಾಟೆ, ಕೊಲೆ ಪ್ರಕರಣ: 7ನೇ ಆರೋಪಿ ಅರೆಸ್ಟ್‌

0
8

ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಸೆಪ್ಟೆಂಬರ್ 6ರಂದು ನಡೆದಿದ್ದ ಗುಂಪುಗಳ ನಡುವಿನ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.

ಬಂಧಿತನನ್ನು ನಗರದ ನಿವಾಸಿ ಮಹಮ್ಮದ್ ಖಾನ್ (53) ಎಂದು ಗುರುತಿಸಲಾಗಿದೆ. ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮಹಮ್ಮದ್ ಖಾನ್ ಬಗ್ಗೆ ಪೊಲೀಸ್ ಬಾತ್ಮೀದಾರರು ನೀಡಿದ ಖಚಿತ ಮಾಹಿತಿ ಆಧರಿಸಿ, ಆಜಾದ್ ನಗರ ಠಾಣೆ ಇನ್ಸ್‌ಪೆಕ್ಟರ್ ಸುರೇಶ ಯಳ್ಳೂರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇತರೆ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.