SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತರ ಶಾಕ್

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತರ ಶಾಕ್

0
10
File Photo

ಚಿತ್ರದುರ್ಗ: ನಗರದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಡಾ. ರವೀಂದ್ರ – ಜಿಲ್ಲಾ ಸರ್ಜನ್, ಜಿಲ್ಲಾಸ್ಪತ್ರೆ, ಚಿತ್ರದುರ್ಗ: ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ಮನೆ ಮೇಲೆ ದಾಳಿ ನಡೆದಿದೆ.

ವೆಂಕಟೇಶ್ – ಇನ್ಸ್ಪೆಕ್ಟರ್, ತೂಕ ಮತ್ತು ಅಳತೆ ಇಲಾಖೆ: ವಿದ್ಯಾನಗರದಲ್ಲಿರುವ ವೆಂಕಟೇಶ್ ಅವರ ಮನೆ ಮೇಲೆ ದಾಳಿ ನಡೆದಿದೆ.

ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಬೆಳಗ್ಗೆಯಿಂದಲೇ ದಾಳಿ ನಡೆದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಪರಿಶೀಲನೆ ನಂತರ ಅಕ್ರಮ ಆಸ್ತಿಯ ಪ್ರಮಾಣ ಎಷ್ಟು ಎಂಬುದು ಗೊತ್ತಾಗಲಿದೆ.