SK Home Ad
Home ಸುದ್ದಿ ದೇಶ ಭಾರತದ ಆರ್ಥಿಕತೆ ಭಾರಿ ಆಪತ್ತಿನಲ್ಲಿದೆ: ಕೊಲಂಬಿಯಾ ವಿವಿಯಲ್ಲಿ ರಾಹುಲ್ ಕಿಡಿ

ಭಾರತದ ಆರ್ಥಿಕತೆ ಭಾರಿ ಆಪತ್ತಿನಲ್ಲಿದೆ: ಕೊಲಂಬಿಯಾ ವಿವಿಯಲ್ಲಿ ರಾಹುಲ್ ಕಿಡಿ

0
42

ನ್ಯೂಯಾರ್ಕ್: ಭಾರತದ ಆರ್ಥಿಕತೆ ತೀವ್ರ ಸಂಕಷ್ಟದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್‌ಅಪ್ ಇಂಡಿಯಾ ಯೋಜನೆಗಳು ನಿರೀಕ್ಷಿತ ಫಲ ನೀಡುವಲ್ಲಿ ವಿಫಲವಾಗಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ದೇಶದ ಉತ್ಪಾದನಾ ವಲಯ ಕುಸಿತ, ನಿರುದ್ಯೋಗ ಹೆಚ್ಚಳ ಹಾಗೂ ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕೃಷಿ ಕ್ಷೇತ್ರವೇ ಉದ್ಯೋಗ ಸೃಷ್ಟಿಯ ಪ್ರಮುಖ ಆಧಾರವಾಗಿದ್ದು, ಸರ್ಕಾರದ ನೀತಿಗಳಿಂದ ಇವು ದುರ್ಬಲಗೊಂಡಿವೆ ಎಂದು ಆರೋಪಿಸಿದರು.

ಅಲ್ಲದೆ, ಅದಾನಿ ಮತ್ತು ಅಂಬಾನಿಯಂತಹ ಉದ್ಯಮಿಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಖಾಸಗಿ ಹೂಡಿಕೆ ನಿರೀಕ್ಷಿತ ಮಟ್ಟದಲ್ಲಿ ಬರುತ್ತಿಲ್ಲ ಎಂದು ದೂರಿದರು.

2024ರ ಲೋಕಸಭೆ ಚುನಾವಣೆಯಲ್ಲಿ 14 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಸುಧಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ದೇಶದಲ್ಲಿ ವಿದ್ಯಾರ್ಥಿ ಚಳವಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಿಂಸಾತ್ಮಕವಾಗಿ ಪ್ರತಿಕ್ರಿಯಿಸುವ ಆತಂಕವೂ ಇದೆ ಎಂದು ರಾಹುಲ್ ಗಾಂಧಿ ಹೇಳಿದರು.