ದೇಶದ ಹಲವು ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮಳೆ ಮತ್ತು ಮಂಜಿನ ಎಚ್ಚರಿಕೆ ನೀಡಿದೆ. ಒಡಿಶಾ, ಪಶ್ಚಿಮ ಬಂಗಾಳ, ಆಂದ್ರ ಪ್ರದೇಶ, ಮಣಿಪುರ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅತಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಮಳೆಯ ಹಿನ್ನೆಲೆಯಲ್ಲಿ ಕೆಲವು ಪ್ರದೇಶಗಳಲ್ಲಿ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ವಿಶೇಷವಾಗಿ ತಗ್ಗು ಪ್ರದೇಶವಾದ ಮಣಿಪುರ್,ನಾಗಾ ಲ್ಯಾಂಡ್, ಮಿಜೋರಾಮ್ ಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಳೆಯ ಸಂದರ್ಭದಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸುವುದು ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅಗತ್ಯವಾಗಿದೆ.
ಇನ್ನೊಂದೆಡೆ, ದೆಹಲಿ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ. ಇದರಿಂದ ರಸ್ತೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳಿವೆ. ವಾಹನ ಸವಾರರು ನಿಧಾನವಾಗಿ ಚಲಿಸುವಂತೆ ಹಾಗೂ ಸಂಚಾರದ ವೇಳೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಮಂಜಿನ ವಾತಾವರಣ ಕಂಡುಬರುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುತ್ತಾ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಮುಖ್ಯವಾಗಿದೆ.




















