ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು , ಹಾಸನದ ಬಳಿಕ ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ 3ನೇ ವ್ಯಕ್ತಿ ಬಲಿಯಾಗಿದ್ದಾರೆ. ಮಲೆನಾಡಿನಲ್ಲಿ
ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಮತ್ತೊಮೆ ಆಂತಕ ಮೂಡಿಸಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ದಾಳಿಗೆ 3 ದಿನದಲ್ಲಿ ಇಬ್ಬರು ಬಲಿಯಾದ ಬೆನ್ನಲ್ಲಿಯೇ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ಕೃಷ್ಣಮೂರ್ತಿ (54) ಅವರಿಗೆ ಆನೆ ಬಲಿ ಪಡಿದಿದೆ.
ಕೃಷ್ಣಮೂರ್ತಿ ದನಗಳನ್ನು ಹುಡುಕಿಕೊಂಡಿ ಕಾಡಿಗೆ ತೆರಳಿದ ವೇಳೆ ಕಾಡಾನೆ ಎದುರಾಗಿ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಗೆ ತುತ್ತಾಗಿದ್ದ ಕೃಷ್ಣಮೂರ್ತಿ ಗಂಭಿರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಎನ್. ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



















