SK Home Ad
Home ನಮ್ಮ ಜಿಲ್ಲೆ ರೈತರಿಗೆ  ಡಿಕೆ ಬಂಪರ್‌ ಗುಡ್‌ ನ್ಯೂಸ್‌ ; 100 ಕೋಟಿ ಅನುದಾನ ಘೋಷಣೆ ಏನಿದು ಕೃಷಿ...

ರೈತರಿಗೆ  ಡಿಕೆ ಬಂಪರ್‌ ಗುಡ್‌ ನ್ಯೂಸ್‌ ; 100 ಕೋಟಿ ಅನುದಾನ ಘೋಷಣೆ ಏನಿದು ಕೃಷಿ ವಿಸ್ತಾರ ಯೋಜನೆ ?

0
7

ರಾಜ್ಯದ ರೈತರ ಆದಾಯ ಹೆಚ್ಚಿಸುವುದು ಹಾಗೂ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಯನ್ನು ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ₹75 ಕೋಟಿ ವೆಚ್ಚ ಮಾಡಲು ಸರ್ಕಾರ ನಿರ್ಧರಿಸಿದೆ.

ನವೆಂಬರ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುವುದು, ರೈತರ ಆದಾಯ ಹೆಚ್ಚಿಸುವುದು ಹಾಗೂ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯ ದೊರಕಿಸಿಕೊಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಏನಿದು ಕೃಷಿ ವಿಸ್ತಾರ ಯೋಜನೆ

ರೃತರ ಆದಾಯ ಹೆಚ್ಚಿಸುವುದಕ್ಕೆ 3 ವರ್ಷಗಳಲ್ಲಿ 100 ಕೋಟಿ ಹೂಡಿಕೆ ಮಾಡುವುದು. ಮತ್ತು ಪ್ರಸಕ್ತ ಸಾಲಿನಲ್ಲಿ 30 ಕೋಟಿ ಅನುದಾನದ ಅಡಿಯಲಲಿ 500 ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿಕೊಡುವುದು. 

ಯೋಜನೆಯಡಿ ರೃತರಿಗೆ ಇಳುವರಿಗಿಂತ ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ಲಾಭದಾಯಕ ಕೃಷಿ ಉದ್ಯಮಕ್ಕೆ ಒತ್ತು ನೀಡುವುದು.

ಎಫ್ ಪಿಒ, ಸ್ವಸಹಾಯ ಸಂಘ ಹಾಗೂ ರೈತರಿಗೆ ಘಟಕ ಸ್ಥಾಪನೆಗೆ ಸಹಾಯಧನ

ಜಿಲ್ಲಾವಾರು ಕ್ಲಸ್ಟರ್‌ – ಕಾರಿಡಾರ್‌ ಗುರುತಿಸಿ 10 ಸಾವಿರ ರೃತ ಕುಟುಂಬಗಳಿಗೆ ನೆರವು ನೀಡುವುದು.

ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ

ಈ ಯೋಜನೆಯಡಿ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡುವುದಕ್ಕೆ ಆದ್ಯತೆ ನೀಡಲಾಗುತ್ತದೆ. ಕೃಷಿ ಉತ್ಪನ್ನಗಳ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ, ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆ ಹಾಗೂ ಕೃಷಿ ತ್ಯಾಜ್ಯವನ್ನು ಮರುಬಳಕೆ ಮಾಡುವ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತದೆ.

ಇದರಿಂದ ಕೃಷಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದರ ಜತೆಗೆ ರೈತರಿಗೆ ಹೆಚ್ಚುವರಿ ಆದಾಯದ ಮೂಲಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.

ಕೃಷಿ ಕ್ಷೇತ್ರವನ್ನು ಆಧುನಿಕಗೊಳಿಸುವುದು, ಉತ್ಪಾದನೆಯ ನಂತರದ ಸಂಸ್ಕರಣೆ ಮತ್ತು ಸಂಗ್ರಹಣಾ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಕೃಷಿ ತ್ಯಾಜ್ಯವನ್ನು ಉಪಯುಕ್ತ ಸಂಪನ್ಮೂಲವನ್ನಾಗಿ ಪರಿವರ್ತಿಸುವ ಮೂಲಕ ಸುಸ್ಥಿರ ಕೃಷಿ ಪದ್ಧತಿಗಳಿಗೂ ಉತ್ತೇಜನ ನೀಡಲಾಗುತ್ತದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಯ ಅನುಷ್ಠಾನದಿಂದ ಕೃಷಿ ಕ್ಷೇತ್ರದಲ್ಲಿ ಮೌಲ್ಯವರ್ಧನೆಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿದ್ದು, ರೈತರ ಆದಾಯ ವೃದ್ಧಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ.