ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
4ನೇ ದಿನದಿಂದ 5ನೇ ದಿನಕ್ಕೆ ನಿಲ್ಲದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಸರ್ಕಾರದ ನಿರ್ಧಾರಕ್ಕೆ ಅಸಾಮಾಧಾನ ವ್ಯಕ್ತಪಡಿಸಿ ಕಳೆದ ಹಲವು ದಿನಗಳಿಂದ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸುತ್ತಿದ್ದರೂ ಸೂಕ್ತ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದ್ದಾರೆ.
ಸರ್ಕಾರ ಕೇವಲ ಭರವಸೆ ನೀಡದೆ, ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸರ್ಕಾರದ ಜೋತೆ ನಿನ್ನೆ ನಡೆದ ಸಭೆಯು ವಿಫಲವಾದ ಬಳಿಕ ಇನ್ನು ತೊಂದರೆ ಅನುಭವಿಸಿವಾದರು ಪರವಾಗಿಲ್ಲ ಆದರೆ ಪ್ರತಿಭಟನೆ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಗುಲಾಬಿ ಗ್ಯಾಂಗ್ ಸರ್ಕಾರ ಸೊಲುತ್ತಾ ಅಥವಾ ಸರ್ಕಾರಕ್ಕೆ ಬೇಸತ್ತು ಕಾರ್ಯಕರ್ತೆಯರು ಹಿಂದೆ ಸರೆಯುತ್ತಾರೆ ಎಂಬುದು ಪ್ರಶ್ನೆ.




















