SK Home Ad
Home ಕ್ರೀಡೆ ಟೀಮ್ ಇಂಡಿಯಾದ ಟಾಪ್ ಬ್ಯಾಟಿಂಗ್‌ಗೆ ಹೊಸ ಇತಿಹಾಸ; ವಿಶೇಷ ದಾಖಲೆ

ಟೀಮ್ ಇಂಡಿಯಾದ ಟಾಪ್ ಬ್ಯಾಟಿಂಗ್‌ಗೆ ಹೊಸ ಇತಿಹಾಸ; ವಿಶೇಷ ದಾಖಲೆ

0
6

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. SENA ರಾಷ್ಟ್ರಗಳ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ನೆಲದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಭಾರತದ ಮೊದಲ ನಾಲ್ವರು ಬ್ಯಾಟರ್‌ಗಳು ಅರ್ಧಶತಕ ಗಳಿಸಿರುವುದು ಇದೇ ಮೊದಲು.

ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಗಳಿಸಿದ 368 ರನ್‌ಗಳಿಗೆ ಉತ್ತರವಾಗಿ ಕಣಕ್ಕಿಳಿದ ಭಾರತ ತಂಡಕ್ಕೆ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ನೀಡಿದರು. ಅವರು 89 ಎಸೆತಗಳಲ್ಲಿ 85 ರನ್ ಗಳಿಸಿ ಮಿಂಚಿದರು. ಮತ್ತೊಂದೆಡೆ ಕನ್ನಡಿಗ ಕೆ.ಎಲ್. ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ 290 ಎಸೆತಗಳಲ್ಲಿ 136 ರನ್ ಗಳಿಸುವ ಮೂಲಕ ಶತಕ ಸಿಡಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಆಡಿದ ಕನ್ನಡಿಗ ದೇವದತ್ ಪಡಿಕ್ಕಲ್ 80 ರನ್ ಗಳಿಸಿ ತಂಡಕ್ಕೆ ಬಲ ತುಂಬಿದರು. ನಾಯಕ ಶುಭಮನ್ ಗಿಲ್ ಕೂಡ ಅರ್ಧಶತಕ ಗಳಿಸಿ ಅಗ್ರ ನಾಲ್ವರು ಬ್ಯಾಟರ್‌ಗಳ ಸಾಧನೆಯನ್ನು ಪೂರ್ಣಗೊಳಿಸಿದರು.

ಈ ದಾಖಲೆ ಏಕೆ ವಿಶೇಷ?

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜ ಬ್ಯಾಟರ್‌ಗಳು ಆಡಿದ್ದರೂ, SENA ದೇಶಗಳ ಒಂದೇ ಇನ್ನಿಂಗ್ಸ್‌ನಲ್ಲಿ 1 ರಿಂದ 4ನೇ ಕ್ರಮಾಂಕದ ಎಲ್ಲಾ ಬ್ಯಾಟರ್‌ಗಳು 50+ ರನ್ ಗಳಿಸಿದ ಉದಾಹರಣೆ ಇರಲಿಲ್ಲ.

ಇದಲ್ಲದೆ, ವಿದೇಶಿ ಟೆಸ್ಟ್‌ನಲ್ಲಿ ಎದುರಾಳಿ ತಂಡ 360ಕ್ಕೂ ಹೆಚ್ಚು ರನ್ ಗಳಿಸಿದ್ದರೂ, ಆ ಮೊತ್ತವನ್ನು ಕೇವಲ 2 ವಿಕೆಟ್ ಕಳೆದುಕೊಂಡು  ದಾಟುವುದು ಅತ್ಯಂತ ಅಪರೂಪ. ಇದೀಗ ಅಂತಹದೊಂದು ಸಾಧನೆಯನ್ನು ಟೀಮ್ ಇಂಡಿಯಾ ಮಾಡಿ. ಈ ಮೂಲಕ 1930ರ (ಆಸ್ಟ್ರೇಲಿಯಾ vs ಇಂಗ್ಲೆಂಡ್) ಮತ್ತು 2012ರ (ಸೌತ್ ಆಫ್ರಿಕಾ vs ಇಂಗ್ಲೆಂಡ್) ನಂತರ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡವಾಗಿ ಭಾರತ ಹೊರಹೊಮ್ಮಿದೆ.

ಸದ್ಯ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 113 ಓವರ್​ಗಳ ಮುಕ್ತಾಯದ ವೇಳೆ 3 ವಿಕೆಟ್ ಕಳೆದುಕೊಂಡು ಬರೋಬ್ಬರಿ 415 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 47 ರನ್​ಗಳ ಮುನ್ನಡೆಯೊಂದಿಗೆ ಬ್ಯಾಟಿಂಗ್ ಮುಂದುವರೆಸಿದೆ.

ಈ ಮೂಲಕ ವಿದೇಶಿ ನೆಲದಲ್ಲಿ ಭಾರತೀಯ ಟೆಸ್ಟ್ ಕ್ರಿಕೆಟ್‌ನ ಹೊಸ ದಾಖಲೆ ನಿರ್ಮಾಣವಾಗಿದೆ. ವಿಶೇಷವಾಗಿ ಒಂದೇ ಇನಿಂಗ್ಸ್‌ನಲ್ಲಿ ಅಗ್ರ ನಾಲ್ವರು ಬ್ಯಾಟರ್‌ಗಳು 50ಕ್ಕೂ ಹೆಚ್ಚು ರನ್ ಗಳಿಸಿರುವುದು ತಂಡದ ಬ್ಯಾಟಿಂಗ್ ಬಲವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.