ಚಂಡೀಗಢ: 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಂಜಾಬ್‌ನಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಚುನಾವಣಾ ಸಿದ್ಧತೆಯಲ್ಲಿ ತೊಡಗಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಮಾದರಿಯಲ್ಲೇ ಪಂಜಾಬ್‌ನಲ್ಲೂ ಮಹಿಳಾ ಮತದಾರರನ್ನು ಕೇಂದ್ರವಾಗಿಟ್ಟುಕೊಂಡು ಯೋಜನೆ ರೂಪಿಸಲು ಮುಂದಾಗಿದೆ.
ರಾಜ್ಯದಲ್ಲಿರುವ ಒಟ್ಟು 2.01 ಕೋಟಿ ಮತದಾರರ ಪೈಕಿ 97.24 ಲಕ್ಷ ಮಹಿಳಾ ಮತದಾರರಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚುನಾವಣಾ ಪ್ರಣಾಳಿಕೆಯಲ್ಲಿ ವಿಶೇಷ ಯೋಜನೆಗಳನ್ನು ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಮಹಿಳಾ ಕೇಂದ್ರಿತ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಪಂಜಾಬ್‌ನಲ್ಲೂ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ಘೋಷಿಸಿರುವ ಯೋಜನೆಗಳನ್ನು ಮುಂದುವರಿಸುವುದರ ಜತೆಗೆ ಮಹಿಳೆಯರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಭರವಸೆಗಳನ್ನೂ ಪ್ರಣಾಳಿಕೆಯಲ್ಲಿ ಸೇರಿಸುವ ಸಾಧ್ಯತೆಯಿದೆ.






















