SK Home Ad
Home ಕ್ರೀಡೆ ಕಿವೀಸ್‌ ವಿರುದ್ಧ ಪಂತ್‌ ದಾಖಲೆಗಳ ಬೇಟೆ; ನ್ಯೂಜಿಲೆಂಡ್‌ ನಲ್ಲಿ ಭಾರತೀಯ ವಿಕೆಟ್ ಕೀಪರ್

ಕಿವೀಸ್‌ ವಿರುದ್ಧ ಪಂತ್‌ ದಾಖಲೆಗಳ ಬೇಟೆ; ನ್ಯೂಜಿಲೆಂಡ್‌ ನಲ್ಲಿ ಭಾರತೀಯ ವಿಕೆಟ್ ಕೀಪರ್

0
6

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಫೋಟಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದಿಕೊಳ್ಳುವು ಮೂಲಕ  ಐತಿಹಾಸಿಕ ಸಾಧನೆ ಮಾಡಿದ್ದಾರೆ.

ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಭಾನುವಾರ ನಡೆದ  ಪಂದ್ಯದ ನಾಲ್ಕನೇ ದಿನ ಪಂತ 135 ಎಸೆತಗಳಲ್ಲಿ ಶತಕ ಪೂರೈಸಿದ ಪಂತ್, ಅಂತಿಮವಾಗಿ 153 ಎಸೆತಗಳಲ್ಲಿ 128 ರನ್ ಗಳಿಸಿ ಔಟಾದರು. ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಸೇರಿದ್ದವು.

ನಾಲ್ಕೂ SENA ರಾಷ್ಟ್ರಗಳಲ್ಲಿ ಶತಕ

ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ (SENA) ಈ ನಾಲ್ಕೂ ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್‌ಕೀಪರ್ ಎಂಬ ಕೀರ್ತಿಗೆ ಪಂತ್ ಪಾತ್ರರಾಗಿದ್ದಾರೆ. ಈ ಸಾಧನೆ ಮಾಡಿದ ಆರನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಅವರದ್ದಾಗಿದೆ.

ಸಿಕ್ಸರ್‌ಗಳ ದಾಖಲೆಯಲ್ಲೂ ಪಂತ್ ಮಿಂಚು

ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಬ್ರೆಂಡನ್ ಮೆಕಲಮ್ ಅವರನ್ನು ಹಿಂದಿಕ್ಕಿ ಪಂತ್ ಎರಡನೇ ಸ್ಥಾನಕ್ಕೇರಿದ್ದಾರೆ. ಪಂತ್ ಅವರ ಟೆಸ್ಟ್ ಸಿಕ್ಸರ್‌ಗಳ ಸಂಖ್ಯೆ 108ಕ್ಕೆ ಏರಿದೆ. ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ 138 ಸಿಕ್ಸರ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ವಿಕೆಟ್‌ಕೀಪರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನ

ವಿಕೆಟ್‌ಕೀಪರ್ ಆಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಪಂತ್ ಗಳಿಸಿದ ಶತಕಗಳ ಸಂಖ್ಯೆ 9ಕ್ಕೆ ಏರಿದೆ. ಈ ಮೂಲಕ ಆಡಮ್ ಗಿಲ್‌ಕ್ರಿಸ್ಟ್ (17) ಮತ್ತು ಆಂಡಿ ಫ್ಲವರ್ (12) ಬಳಿಕ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ನ್ಯೂಜಿಲೆಂಡ್ ನೆಲದಲ್ಲಿ ಟೆಸ್ಟ್ ಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್‌ಕೀಪರ್ ಎಂಬ ದಾಖಲೆಯನ್ನೂ ಪಂತ್ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಪಂತ್ ಅವರ ಈ ಶತಕ ಭಾರತ ತಂಡದ ಬ್ಯಾಟಿಂಗ್ ಸಾಧನೆಗೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲಾಗಿದೆ.