SK Home Ad
Home ನಮ್ಮ ಜಿಲ್ಲೆ ಬೆಂಗಳೂರು ಚಳಿಯ ನಡುವೆ ಮಳೆ ಎಂಟ್ರಿ: ನ. 24, 25ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ವರ್ಷಧಾರೆ

ಚಳಿಯ ನಡುವೆ ಮಳೆ ಎಂಟ್ರಿ: ನ. 24, 25ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ವರ್ಷಧಾರೆ

0
13

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಈ ವಾರಾಂತ್ಯದಲ್ಲೂ ಚಳಿಯ ವಾತಾವರಣ ಮುಂದುವರಿಯಲಿದ್ದು, ಇದರ ನಡುವೆಯೇ ನವೆಂಬರ್ 24 ಹಾಗೂ 25ರಂದು ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿಯ ಪ್ರಕಾರ, ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದ್ದು ಆಗಾಗ ಕೆಲವು ಪ್ರದೇಶಗಳಲ್ಲಿ ಮೋಡ ಕವಿಯುವ ಸಾಧ್ಯತೆಯಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಕನಿಷ್ಠ ಉಷ್ಣಾಂಶದ ವಿವರದಂತೆ ವಿಜಯಪುರದಲ್ಲಿ ಅತ್ಯಂತ ಕಡಿಮೆ 129 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಚಿಂತಾಮಣಿ ಹಾಗೂ ಮಂಡ್ಯದಲ್ಲಿ 131 ಡಿಗ್ರಿ ಸೆಲ್ಸಿಯಸ್, ಧಾರವಾಡದಲ್ಲಿ 13.2 ಡಿಗ್ರಿ ಸೆಲ್ಸಿಯಸ್ ಮತ್ತು ದಾವಣಗೆರೆ ಹಾಗೂ ರಾಯಚೂರಿನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಹವಾಮಾನ ಮುನ್ಸೂಚನೆಯ ಪ್ರಕಾರ, ನವೆಂಬರ್ 24ರಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 24ರ ಮಂಗಳವಾರ ಹಾಸನ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಒಂದೋ ಎರಡೋ ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮೈಸೂರು, ಕೋಲಾರ, ಬೆಂಗಳೂರು ದಕ್ಷಿಣ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ನವೆಂಬರ್ 25ರ ಬುಧವಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೋ ಎರಡೋ ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ದಾವಣಗೆರೆ, ಮಂಡ್ಯ ಮೈಸೂರು, ಕೋಲಾರ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.