SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 21 ವರ್ಷ ಜೈಲು

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 21 ವರ್ಷ ಜೈಲು

0
91
(File Photo)

ದಾವಣಗೆರೆ: 16 ವರ್ಷದ ಮಾನಸಿಕ ಅಸ್ವಸ್ಥ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ 21 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆದೇಶಿಸಿದೆ. ಅಲ್ಲದೆ, ಸಂತ್ರಸ್ತೆಗೆ ಸರ್ಕಾರದಿಂದ 10.50 ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಹೊನ್ನಾಳಿ ತಾಲೂಕಿನ ಗಣೇಶ (24) ಶಿಕ್ಷೆಗೆ ಒಳಗಾದ ಆರೋಪಿ. 2024ರಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಯಲ್ಲಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಹಿನ್ನೆಲೆಯಲ್ಲಿ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ 2024ರ ಜೂ. 10ರಂದು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಎಚ್. ಸುನೀಲ್‌ಕುಮಾರ್, ತನಿಖೆ ನಡೆಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗಡೆ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ. 26ರಂದು ಆರೋಪಿಗೆ 21 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸಂತ್ರಸ್ತೆಗೆ ಸರ್ಕಾರದಿಂದ 10.50 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.