SK Home Ad
Home ಸುದ್ದಿ ರಾಜ್ಯ 12 ದಿನಗಳ ಆಶಾ ಹೋರಾಟಕ್ಕೆ ಬ್ರೇಕ್‌: ಜನವರಿಯಿಂದ 2 ಸಾವಿರ ರೂ. ಹೆಚ್ಚುವರಿ ವೇತನ

12 ದಿನಗಳ ಆಶಾ ಹೋರಾಟಕ್ಕೆ ಬ್ರೇಕ್‌: ಜನವರಿಯಿಂದ 2 ಸಾವಿರ ರೂ. ಹೆಚ್ಚುವರಿ ವೇತನ

0
49

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 2 ಸಾವಿರ ರೂ. ಹೆಚ್ಚುವರಿ ವೇತನ ನೀಡುವುದರ ಜತೆಗೆ, ಅವರು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹೆಚ್ಚುವರಿ ವೇತನವು 2027ರ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಹೆಚ್ಚುವರಿ ವೇತನ ಹಾಗೂ ಪ್ರೋತ್ಸಾಹ ಧನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕಳೆದ 12 ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಅಂತ್ಯವಾಗಿದೆ. ಮುಖ್ಯಮಂತ್ರಿ ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.