SK Home Ad
Home ಸುದ್ದಿ ದೇಶ ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ಕ್ಷೇತ್ರ ಪುನರ್ವಿಂಗಡಣೆ ಸಂಚು

ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ಕ್ಷೇತ್ರ ಪುನರ್ವಿಂಗಡಣೆ ಸಂಚು

0
35

ನವದೆಹಲಿ: ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮೂಲಕ ದೇಶದ ರಾಜಕೀಯ ಭೂಪಟವನ್ನೇ ಬದಲಾಯಿಸಿ, ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಟೀಕಿಸಿದರು. ಮಹಿಳಾ ಮೀಸಲಾತಿ ಜಾರಿಗೆ ಕ್ಷೇತ್ರಗಳ ಮರುಹಂಚಿಕೆಯನ್ನು ಜೋಡಿಸುವ ಅಗತ್ಯವಿಲ್ಲ. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ ಎಂದು ದೂರಿದರು.

ಚುನಾವಣಾ ಅಕ್ರಮಗಳ ಕುರಿತು ಕಾಂಗ್ರೆಸ್ ಪ್ರಶ್ನೆಗಳನ್ನು ಎತ್ತಿದ ಬಳಿಕ ಬಿಜೆಪಿ ಹೊಸ ಮಾರ್ಗಗಳನ್ನು ಹುಡುಕುತ್ತಿದೆ. ಕ್ಷೇತ್ರ ಪುನರ್ವಿಂಗಡಣೆಯ ನೆಪದಲ್ಲಿ ದೇಶದ ರಾಜಕೀಯ ವ್ಯವಸ್ಥೆಯಲ್ಲೇ ಬದಲಾವಣೆ ತರಲು ಮುಂದಾಗಿದೆ ಎಂದು ಆರೋಪಿಸಿದರು.

ದೇಶದ ಶೇ. 80ರಷ್ಟು ಜನರು ಹಾಗೂ ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶೇ. 100ರಷ್ಟು ಜೆನ್‌-ಝೀ ಯುವಕರು ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಅಭಿಪ್ರಾಯ ಹೊಂದಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದರು.