SK Home Ad
Home ಸುದ್ದಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕಡ್ಡಾಯ; ನಿರ್ಲಕ್ಷ್ಯ ತೋರಿದರೆ ಮುಖ್ಯ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆ...

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕಡ್ಡಾಯ; ನಿರ್ಲಕ್ಷ್ಯ ತೋರಿದರೆ ಮುಖ್ಯ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮ

0
5

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪುರಕ ಪೌಷ್ಠಿಕ ಆಹಾರ ವಿತರಣ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೋಲಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2026-27 ನೇ  ಸಾಲಿನ ಏರಡನೆ ತ್ರೈಮಾಸಿಕ ಅವಧಿಯಾದ ಅಕ್ಟೋಬರ್ ನಿಂದ ಡಿಸೆಂಬರ್‌2026   ವರೆಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಬೇಕು ಎಂದು ಅಜೀಂ ಪ್ರೇಮಜಿ ಫೌಂಡೇಶನ ವತಿಯಿಂದ ಒಟ್ಟು ₹79.95 ಕೋಟಿ ಅನುದಾನ ಬಿಡುಗಡೆಯಾಗಿದೆ.

ಈ ಪೈಕಿ ಹಿಂದಿನ ಅವಧಿಯ ಖಾತೆಯಲ್ಲಿರುವ ಉಳಿಕೆ ಅನುದಾನ ಸೇರಿದಂತೆ ₹79.67 ಕೋಟಿ ಹಣವನ್ನು ಜಿಲ್ಲೆ ಮತ್ತು ತಾಲ್ಲೂಕು ಹಂತದ ಖಾತೆಗಳಿಗೆ ಹಂಚಿಕೆ ಮಾಡಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಅವರು ನವೆಂಬರ್ 28ರಂದು ಆದೇಶ ಹೊರಡಿಸಿದ್ದಾರೆ.

ವಾರದಲ್ಲಿ 6 ದಿನ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಮತ್ತು ಪೂರ್ವ ಪ್ರಾಥಮಿಕ ತರಗತಿ ಮಕ್ಕಳಾದ ಎಲ್ ಕೆಜಿ, ಯು.ಕೆಜಿ ಪೂರಕ ಪೌಷ್ಠಿಕ ಆಹಾರ ವಿತರರಿಸಲಾಗುತ್ತದೆ.

ಸರ್ಕಾರದಿಂದ ವಾರದಲ್ಲಿ ಎರಡು ದಿನ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರ ನೀಡಲಾಗುತ್ತಿದ್ದು, ಉಳಿದ ನಾಲ್ಕು ದಿನಗಳ ಪೂರಕ ಪೌಷ್ಟಿಕ ಆಹಾರದ ವೆಚ್ಚವನ್ನು ಅಜೀಂ ಪ್ರೇಮ್‌ಜಿ ಫೌಂಡೇಶನ್ ಭರಿಸುತ್ತಿದೆ. ಈ ಕಾರ್ಯಕ್ರಮದಡಿ ವಾರದಲ್ಲಿ ಆರು ದಿನಗಳೂ ಮೊಟ್ಟೆ ವಿತರಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಮೊಟ್ಟೆ ಸ್ವೀಕರಿಸದ ವಿದ್ಯಾರ್ಥಿಗಳಿಗೆ ಮಾತ್ರ ಇಲಾಖೆಯ ಮಾರ್ಗಸೂಚಿಯಂತೆ ಬಾಳೆಹಣ್ಣು ವಿತರಿಸಬೇಕು. ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ₹6ರ ಘಟಕ ವೆಚ್ಚದ ಮಿತಿಯಲ್ಲಿ ಕಾರ್ಯಕ್ರಮ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಅನುದಾನದ ಕೊರತೆಯ ನೆಪದಲ್ಲಿ ಯಾವುದೇ ಶಾಲೆಯಲ್ಲಿ ಮೊಟ್ಟೆ ವಿತರಣೆಯನ್ನು ಸ್ಥಗಿತಗೊಳಿಸಬಾರದು ಎಂದು ಇಲಾಖೆ ಎಚ್ಚರಿಸಿದೆ.

ಶಾಲೆಗಳ ಖಾತೆಗೆ ಹಣ ಜಮೆ ಖಚಿತಪಡಿಸಲು ಸೂಚನೆ

ಜಿಲ್ಲೆ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳು ಅನುದಾನ ಬಿಡುಗಡೆಯಾದ ತಕ್ಷಣ ಶಾಲೆಗಳ ಅಗತ್ಯಕ್ಕೆ ಅನುಗುಣವಾಗಿ ಹಣ ಹಂಚಿಕೆ ಮಾಡಬೇಕು. ತಾಲ್ಲೂಕು ಹಂತದಿಂದ ಶಾಲೆಗಳ SDMC ಬ್ಯಾಂಕ್ ಖಾತೆಗಳಿಗೆ ಹಣ ಬಿಡುಗಡೆ ಮಾಡಬೇಕು.

ಎನ್‌ ಜಿಓ ಗಳ ಬಿಲ್‌ ಪಾವತಿಯಲ್ಲಿ ವಿಳಂಬ ಬೇಡ

ಪೂರಕ ಪೌಷ್ಟಿಕ ಆಹಾರ ಪೂರೈಸುವ ಸ್ವಯಂಸೇವಾ ಸಂಸ್ಥೆಗಳ (NGO) ಬಿಲ್‌ಗಳ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು. ದೈನಂದಿನ ಫಲಾನುಭವಿಗಳ ಸ್ವೀಕೃತಿ ದಾಖಲೆ, ಲೆಕ್ಕಪತ್ರಗಳು ಹಾಗೂ ಬಿಲ್‌ಗಳನ್ನು ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪಿಎಂ ಪೋಷಣ್ ಸಹಾಯಕ ನಿರ್ದೇಶಕರಿಗೆ ಸೂಚಿಸಲಾಗಿದೆ.

ಪ್ರತದಿನ ಆನ್ ಲೈನಲ್ಲಿ ಪ್ರತಿದಿನ ಮಾಹಿತಿ ಅಪಡೇಟ್‌ ಕಡ್ಡಾಯ

ಶಾಲೆಗಳಲ್ಲಿ ಪ್ರತಿದಿನ ಎಷ್ಟು ವಿದ್ಯಾರ್ಥಿಗಳು ಮೊಟ್ಟೆ ಮತ್ತು ಬಾಳೆಹಣ್ಣು ಸ್ವೀಕರಿಸಿದ್ದಾರೆ ಎಂಬ ಮಾಹಿತಿಯನ್ನು ವೆಬ್ ಅಪ್ಲಿಕೇಶನ್‌ನಲ್ಲಿ ಮುಖ್ಯಶಿಕ್ಷಕರು ತಮ್ಮ ಲಾಗಿನ್ ಮೂಲಕ ಕಡ್ಡಾಯವಾಗಿ ದಾಖಲಿಸಬೇಕು.

ಒಟ್ಟಿನಲ್ಲಿ, ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.