SK Home Ad
Home ಸುದ್ದಿ ದೇಶ ಸ್ಟಾಲಿನ್ ಮನವೊಲಿಕೆಗೆ ಬಂದವರಿಗೆ ʻಗೋ ಬ್ಯಾಕ್ ಕಾಂಗ್ರೆಸ್ʼ ಘೋಷಣೆ

ಸ್ಟಾಲಿನ್ ಮನವೊಲಿಕೆಗೆ ಬಂದವರಿಗೆ ʻಗೋ ಬ್ಯಾಕ್ ಕಾಂಗ್ರೆಸ್ʼ ಘೋಷಣೆ

0
60

ಚೆನ್ನೈ: ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಸೂಚಿಸಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಮನವೊಲಿಸಲು ತಮಿಳುನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ವಿಶೇಷ ಅಧಿವೇಶನದಲ್ಲಿ ಮಂಡಿಸಲಿರುವ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ನೀಡಲು ನಿರ್ಧರಿಸಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸ್ಟಾಲಿನ್ ಅವರ ಮನವೊಲಿಸಲು ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರ ನಿಯೋಗ ಇಂದು ಚೆನ್ನೈಗೆ ಆಗಮಿಸಿದೆ.

ಚೆನ್ನೈನಲ್ಲಿರುವ ಸ್ಟಾಲಿನ್ ನಿವಾಸದ ಎದುರು ಜಮಾಯಿಸಿದ ಡಿಎಂಕೆ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ‘ಗೋ ಬ್ಯಾಕ್ ಕಾಂಗ್ರೆಸ್’ (ಕಾಂಗ್ರೆಸ್ ವಾಪಸ್ ಹೋಗಿ) ಎಂಬ ಘೋಷಣೆಯುಳ್ಳ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯ ಇದೀಗ ಬೀದಿಗೆ ಬಂದಿದ್ದು, ಮೈತ್ರಿಕೂಟದೊಳಗಿನ ರಾಜಕೀಯ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸಿವೆ.