SK Home Ad
Home ಸುದ್ದಿ ದೇಶ ʻಮೋದಿ ಸರ್ಕಾರಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲʼ

ʻಮೋದಿ ಸರ್ಕಾರಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲʼ

0
5

ನವದೆಹಲಿ: ರಾಷ್ಟ್ರೀಯ ಹಿತಾಸಕ್ತಿಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ನಿರ್ಧಾರ ಶೀಘ್ರದಲ್ಲೇ ಸಾಕಾರಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸಾಂವಿಧಾನಿಕ ಮೀಸಲಾತಿ ಕಲ್ಪಿಸುವ ಮೂಲಕ ಭಾರತವು ಈ ಸೌಲಭ್ಯ ನೀಡಿದ ಮೊದಲ ಪ್ರಮುಖ ಆರ್ಥಿಕತೆಯ ರಾಷ್ಟ್ರವಾಗಲಿದೆ ಎಂದು ಹೇಳಿದ್ದಾರೆ.

ಮಹಿಳೆಯರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರೆಯುವುದರಿಂದ ಯುವಜನತೆಗೂ ಸಂಸತ್ ಪ್ರವೇಶಿಸಲು ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿವೆ. ಮಹಿಳಾ ಮೀಸಲಾತಿ ಜಾರಿಯಿಂದ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.