ಮುಖ್ಯಮಂತ್ರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

0
11

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಕಾಂಗ್ರೆಸ್ ನಾಯಕರು ಹಾಗೂ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ‌ಪ್ರದರ್ಶಿಸಿದ್ದು, ಸಾಕಪ್ಪ ಸಾಕು 40% ಸರ್ಕಾರ ಸಾಕು ಎಂಬ ಪೋಸ್ಟರ್‌ನ್ನು ಕಾಂಗ್ರೆಸ್ ನಾಯಕರು ಪ್ರದರ್ಶಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.


ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಇನ್ನು ಸೂಟ್ ಕೇಸ್ ತುಂಬ ನಕಲಿ ನೋಟುಗಳನ್ನು ಇಟ್ಟು ಪ್ರತಿಭಟನೆ ಮಾಡಲಾಯಿತು. ಶಾಸಕ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ಆರಂಭಿಸಲಾಗಿದೆ. ಬಿಜೆಪಿಯ ‘ರೋಲ್ ಕಾಲ್ ಮಾಡೆಲ್’ ವಿರೂಪಾಕ್ಷಪ್ಪ ಎಂದು ಬರೆದಿರುವ ಪೋಸ್ಟರ್ ಅನ್ನು ಅಂಟಿಸಲಾಯಿತು.

Previous articleತಡರಾತ್ರಿ ಹುಬ್ಬಳ್ಳಿಗೆ ಬಂದಿಳಿದ ಕೇಜ್ರಿವಾಲ್‌
Next articleಮಾರ್ಚ್ 10 ರಿಂದ ಮಂಗಳೂರು ಹುಬ್ಬಳ್ಳಿ ನೇರ ವಿಮಾನ ರದ್ದು…!!