ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ಸಂಸದ ಧೃವನಾರಾಯಣ್ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

0
27

ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಚಿಂತನೆಯಲ್ಲಿ ಸಾಮ್ಯ
ಧೃವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು. ಎಸ್ರದು ಬಾರಿ ಶಾಸಕರಾಗಿ ಹಾಗೂ ಸಂಸದರಾಗಿದ್ದ ಅವರು ಈ ರಾಜ್ಯದ ಅಭಿವೃದ್ಧಿ, ಪರಿಶಿಷ್ಟ ಜನಾಂಗದ ಬಗ್ಗೆ ಹಾಗೂ ಚಾಮರಾಜನಗರದ ಬಗ್ಗೆ ಶ್ರೇಷ್ಠ ಕಳಕಳಿ ವ್ಯಕ್ತಪಡಿಸುತ್ತಿದ್ದರು. ಒಳ್ಳೆ ಕೆಲಸ ಮಾಡಿದ್ದರು. ಅವರಿಗೆ ಹೃದಯಾಘಾತವಾಗಿ ಸಾವು ಉಂಟಾಗಿದ್ದು ಆಘಾತ ತಂದಿದೆ. ನಂಬಲಾಗುತ್ತಿಲ್ಲ. ಅತಿ ಕ್ರಿಯಾಶೀಲ ರಾಗಿ ಓಡಾಡುತ್ತಿದ್ದರು ಎಂದರು.
ಬದ್ಧತೆಯುಳ್ಳ ರಾಜಕಾರಣಿ
ಸಂಸತ್ತಿನಲ್ಲಿ ಅವರು ಪರಿಣಾಮಕಾರಿಯಾಗಿ ಮಾತನಾಡುತ್ತಿದ್ದರು.ಪರಿಶಿಷ್ಟ ಜನಾಂಗ, ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ಬದ್ಧತೆಯುಳ್ಳ ರಾಜಕಾರಣಿಯನ್ನು ಕಳೆದುಕೊಂಡಿದ್ದೇವೆ. ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Previous articleಪರೀಕ್ಷೆಗೆ ಅಡ್ಡಿಯಾಗದ ಅಪಘಾತ
Next articleಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಬಿಜೆಪಿಗೆ