ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ ರೆಡ್ಡಿ ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಖಂಡ ಆಂಧ್ರ ಪ್ರದೇಶದ ಕೊನೆಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಒಂದೇ ಸಾಲಿನಲ್ಲಿ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ.