ಮಾ.೨೦ರಂದು ಬೆಳಗಾವಿಗೆ ರಾಹುಲ್ ಆಗಮನ: 16ರಂದು ಪೂರ್ವಭಾವಿ ಸಭೆ

0
11
ರಾಹುಲ್‌

ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ.20ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.
ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದಿನಾಂಕ 16 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಕಾಂಗ್ರೆಸ್ ಮುಖಂಡರುಗಳ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ ಹಾಗೂ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಶಾಸಕರು, ಮಾಜಿ ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, 2019ರ ಲೋಕಸಭಾ ಅಭ್ಯರ್ಥಿಗಳು, 2018ರ ವಿಧಾನಸಭಾ ಅಭ್ಯರ್ಥಿಗಳು, ಉಸ್ತುವಾರಿ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರುಗಳು, 2023ರ ವಿಧಾನಸಭಾ ಆಕಾಂಕ್ಷಿಗಳು ಹಾಗೂ ಮುಂಚೂಣಿ ಘಟಕ/ವಿಭಾಗ/ಸೆಲ್‌ಗಳ ಜಿಲ್ಲಾಧ್ಯಕ್ಷರುಗಳು ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Previous articleಲೂಟಿ ಹೊಡೆಯೋದೇ ಬಿಜೆಪಿ ಕೆಲಸ
Next articleಹೊಂದಾಣಿಕೆ ಸಾಕು, ಹಿಂದುತ್ವ ಬೇಕು