ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಸಿದ್ಧ: ರಾಮುಲು

0
11
sriramulu

ಬಳ್ಳಾರಿ: ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ಧವಿದೆ. ಯಾವುದೇ ಕಾರಣಕ್ಕೂ ಪ್ರಯಾಣಿಕರಿಗೆ ತೊಂದರೆ ಕೊಟ್ಟು ಸಾರಿಗೆ ನೌಕರರು ಮುಷ್ಕರ ನಡೆಸಬಾರದು ಎಂದು ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಈಗಾಗಲೇ ಸಾರಿಗೆ ನೌಕರರ ಸಂಘಗಳ ಮುಖಂಡರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಶೇ. 24ರಷ್ಟು ವೇತನ ಪರಿಷ್ಕರಣೆ ಮಾಡಬೇಕೆಂಬುದು ನೌಕರರ ಬೇಡಿಕೆಯಾಗಿದೆ. ಶೇ. 10ರಿಂದ 12ರಷ್ಟು ವೇತನ ಪರಿಷ್ಕರಣೆಗೆ ಸಮ್ಮತಿಸಿದ್ದೇವೆ. ಅಂತಿಮವಾಗಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.

Previous articleವಿಪ ಸದಸ್ಯ ಆರ್‌ ಶಂಕರ ಮನೆ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ
Next articleಹಿರಿಯ ನಟ ಸಮೀರ್‌ ಖಾಖರ್‌ ನಿಧನ