Home Advertisement
Home ಅಪರಾಧ 35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ

35 ವರ್ಷದ ಗ್ರಾಮ ಪಂಚಾಯಿತಿ ಸದಸ್ಯ ಆತ್ಮಹತ್ಯೆ

0
94
ಸಾವು

ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು ತಮ್ಮ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಸಂಜೆಯ ನಂತರ ನೀರ್‌ಮಾರ್ಗದಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಿವಾಹಿತರಾಗಿರುವ ಸಂದೀಪ್ ಶೆಟ್ಟಿ ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಪೊಲೀಸರಿಂದ ತನಿಖೆ ಮುಂದುವರೆದಿದೆ.

Previous articleಶಿವಚರಿತ್ರೆ ಲೋಕಾರ್ಪಣೆಗೆ ಕ್ಷಣಗಣನೆ
Next article‘ಕಬ್ಜ’ ಬಿಡುಗಡೆ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ