SK Home Ad
Home ಅಪರಾಧ ದಾಖಲೆಗಳಿಲ್ಲದ 25 ಲಕ್ಷ ರೂ. ವಶ

ದಾಖಲೆಗಳಿಲ್ಲದ 25 ಲಕ್ಷ ರೂ. ವಶ

0
178

ಗದಗ: ಯಾವದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮುಳಗುಂದ ಚೆಕ್‌ಪೋಸ್ಟ್ನಲ್ಲಿ ವಶಕ್ಕೆ ಪಡೆದಿದ್ದು, ೨೫ ಲಕ್ಷ ರೂಪಾಯಿಗಳನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಈ ವ್ಯಕ್ತಿಗಳು ಸಾಗಿಸುತ್ತಿದ್ದ ಹಣಕ್ಕೆ ಯಾವುದೇ ದಾಖಲೆಗಳಿಲ್ಲ. ಕಾರಿನಲ್ಲಿ ದಾವಣಗೇರಿಯಿಂದ ಲಕ್ಷ್ಮೇಶ್ವರಕ್ಕೆ ಸಾಗಿಸುತ್ತಿದ್ದರೆಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳ ಹಿಂದೆ ಇಲ್ಲಿಯ ಹುಯೀಲಗೋಳ ನಾರಾಯಣರಾವ ವರ್ತುಳದಲ್ಲಿ ಸುಮಾರು ಎರಡು ಕೋಟಿ ರೂಪಾಯಿಗಳ ಮೌಲ್ಯದ ನಾಲ್ಕು ಕಿಲೋ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಚುನಾವಣೆ ಘೋಷಣೆಗೆ ದಿನಗಣನೆ ಪ್ರಾರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ೧೮ ಚೆಕ್ ಪೋಸ್ಟ್ ಳನ್ನು ಪ್ರಾರಂಭಿಸಿದೆ. ಅಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಮೂಲಕ ಸಂಚರಿಸುವ ಪ್ರತಿಯೊಂದು ವಾಹನ ತಡೆದು ತಪಾಸಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಗಳು ತಿಳಿಸಿವೆ.