ಕಾಂಗ್ರೆಸ್​ ಮಾಜಿ ಸಚಿವ ಅಂಜನಮೂರ್ತಿ ನಿಧನ

0
14

ಬೆಂಗಳೂರು: ಕಾಂಗ್ರೆಸ್‌ನ ಮಾಜಿ ಸಚಿವ ಅಂಜನಮೂರ್ತಿ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಜನಮೂರ್ತಿ ಅವರನ್ನು ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ ಅವರು ನೆಲಮಂಗಲದಿಂದ ಮೂರು ಬಾರಿ ಸ್ಪರ್ಧಿಸಿ ಶಾಸಕರಾಗಿ, ನಂತರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Previous articleಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ
Next articleಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಅಂತ್ಯಕ್ರಿಯೆ: ಬೊಮ್ಮಾಯಿ