ರಾಜಭವನ ಮುತ್ತಿಗೆಗೆ ಯತ್ನಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಸೇರಿದಂತೆ ಹಲವು ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಿದೆ ಎಂದು ಕಾಂಗ್ರೆಸ್ ರಾಜಭವನ ಚಲೋ ನಡೆಸಿದ್ದು, ಈ ವೇಳೆ ಮುತ್ತಿಗೆಗೆ ಯತ್ನಿಸಿದ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಪಿಸಿಸಿ ಕಚೇರಿಯಿಂದ ಆರಂಭವಾದ ರ್ಯಾಲಿಯಲ್ಲಿ ಬಿಜೆಪಿ ಸರ್ಕಾರ ದಲಿತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ, ಸಲೀಂ ಅಹಮ್ಮದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.