ನೀತಿ ಸಂಹಿತೆ: ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಪಾಸಣೆ

0
19

ದೊಡ್ಡಬಳ್ಳಾಪುರ: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ವಾಹನ ಪರಿಶೀಲನೆ ನಡೆಸುತ್ತಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರನ್ನು ತಡೆದು ಪರಿಶೀಲನೆ ನಡೆಸಿದರು.
ಬೆಂಗಳೂರಿನಿಂದ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಹೊರಟಿದ್ದ ಮುಖ್ಯಮಂತ್ರಿಗಳನ್ನು ಈ ವೇಳೆ ಮಾರ್ಗ ಮಧ್ಯೆ ಮಾರಸಂದ್ರ ಸಮೀಪ ಹೊಸಹುಡ್ಯ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಸಿಎಂ ಕಾರನ್ನು ತಪಾಸಣೆ ಮಾಡಲಾಯಿತು.

Previous articleಇಟ್ಟಿಗೆ ಗೂಡ್ಸ್ ಪಲ್ಟಿ: ಓರ್ವ ಸಾವು, ಇಬ್ಬರಿಗೆ ಗಾಯ
Next articleಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸುವುದೇ ಡಿಕೆಶಿ ದಂಧೆ