8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

0
12
cm

ಬೆಂಗಳೂರು: ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆದಿದ್ದು, ಎರಡು ದಿನಗಳ ಕಾಲ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆ ಬಳಿಕ ಕೇಂದ್ರಕ್ಕೆ ಅಭ್ಯರ್ಥಿಗಳ ಪಟ್ಟಿ ಕಳುಹಿಸಲಾಗುವುದು. 8ನೇ ತಾರೀಖು ಕೇಂದ್ರದಲ್ಲಿ ಚರ್ಚೆಯಾಗಿ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ:
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಇಲ್ಲದಿರುವ ಸೀಟಿಗೆ ಗುದ್ದಾಡುತ್ತಿದ್ದಾರೆ ಎಂದ ಮುಖ್ಯಮಂತ್ರಿಗಳು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೋರಾಡುತ್ತಿದೆ. ಜನರಿಗೆ, ಕರ್ನಾಟಕಕ್ಕೆ ಒಳ್ಳೆಯದು ಮಾಡಬೇಕು ಎಂಬ ಯೋಚನೆ ಮಾಡಿಲ್ಲ ಎಂದರು.

Previous articleವಿಧಾನಸಭಾ ಚುನಾವಣೆ; ಇವಿಎಂ ರವಾನೆಗೆ ಕ್ರಮ: ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ
Next articleಡಿಕೆಶಿ ಸುಮ್ಮನೆ ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆ ಅಷ್ಟೆ