ಬೊಮ್ಮಾಯಿ ಧಮ್‌, ತಾಕತ್‌ ಎಷ್ಟಿದೆ ತೋರಿಸಲಿ

0
13

ಹಾವೇರಿ : ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ನೆಹರು ಓಲೇಕಾರ್ ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನನ್ನ ಬೆಳವಣಿಗೆ ಸಹಿಸದೇ ನನಗೆ ಟಿಕೆಟ್ ನೀಡಿಲ್ಲ. ಬೊಮ್ಮಾಯಿ ಧಮ್, ತಾಕತ್ ಎಷ್ಟಿದೆ ತೋರಿಸಲಿ, ನಾವು ಕೂಡ ನಮ್ಮ ತಾಕತ್ ಬಗ್ಗೆ ತೋರಿಸುತ್ತೇವೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.
ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ಕೊಳ್ಳೆ ಹೊಡೆದಿದ್ದಾರೆ, ರೈತರಿಗೆ ಒಂದು ಪೈಪ್ ಕೂಡ ನೀಡಿಲ್ಲ. ತುಂತುರು ನೀರಾವರಿ ಯೋಜನೆ ಶಿಗ್ಗಾಂವಿ ಕ್ಷೇತ್ರದ ಜನರಿಗೆ ಮಾತ್ರ ಸೀಮಿತ ಮಾಡಿದ್ದಾರೆ. ಇತರ ಜಿಲ್ಲೆಯ ರೈತರಿಗೆ ಯೋಜನೆಯಿಂದ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಶಾಸಕ ನೆಹರು ಓಲೇಕಾರ್ ಅಸಮಾಧಾನ ಹೊರ ಹಾಕಿದ್ದಾರೆ.
ಪ್ರತಿಭಟನೆ…
ಶಾಸಕ ನೆಹರು ಓಲೇಕಾರ ಅವರಿಗೆ ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿಸಿರುವುದನ್ನು ಖಂಡಿಸಿ, ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

Previous articleಹೆಲಿಪ್ಯಾಡ್ ಬಳಿ ಬೆಂಕಿ: ಸಿಎಂ ಅಪಾಯದಿಂದ ಪಾರು
Next articleಹಾಲಿಗೆ, ಹೊಲಸು ರಾಜಕಾರಣದ ಹುಳಿ