ವರುಣ ಕ್ಷೇತ್ರದಿಂದ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

0
113
ವರುಣ

ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಇಂದು ನಾಮಪತ್ರ ಸಲ್ಲಿಸಿದರು.
ನಂಜನಗೂಡಿನ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದರಾದ ಪ್ರತಾಪ್ ಸಿಂಹ, ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.
ಇದಕ್ಕೂ ಮುನ್ನ ಬೆಳಗ್ಗೆ ಕೋಟೆ ಆಂಜನೇಯ ಹಾಗೂ ಚಾಮುಂಡೇಶ್ವರಿ ದೇವಿಗೆ ವಿ.ಸೋಮಣ್ಣ ಪೂಜೆ ಸಲ್ಲಿಸಿದರು. ನಂತರ ನಂಜನಗೂಡಿನ ಗೂಳೂರು ಸರ್ಕಲ್​ನಲ್ಲಿ ಸಿ ಎಂ.ಬಸವರಾಜ ಬೊಮ್ಮಾಯಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Previous articleಕಾಂಗ್ರೆಸ್ ಬೆಂಬಲಿತ ಸಂಪಿಗೆ ರಾಘು ಕೋಟ್ಯಾನ್ ಆತ್ಮಹತ್ಯೆ
Next articleಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ನಾಮಪತ್ರ ಸಲ್ಲಿಕೆ