ಜೆಡಿಎಸ್‌ ಬಂಡಾಯ ಅಭ್ಯರ್ಥಿ ತುಕಾರಾಂ ಸುರ್ವೆ ಬಿಜೆಪಿ ಸೇರ್ಪಡೆ

0
11

ಕುಷ್ಟಗಿ: ಕುಷ್ಟಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿದ್ದ ತುಕಾರಾಂ ಸುರ್ವೆ ಬಿಜೆಪಿ ಸೇರಿದ್ದಾರೆ.
ಕಳೆದ ಒಂದು ವರ್ಷಗಳಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದುಕೊಂಡು ಜೆಡಿಎಸ್ ಪಕ್ಷವನ್ನು ಕುಷ್ಟಗಿ ತಾಲೂಕಿನಲ್ಲಿ ಸಂಘಟನೆ ನಡೆಸಿ ಕೊನೆ ಘಳಿಗೆಯಲ್ಲಿ ಟಿಕೆಟ್‌ ವಂಚಿತರಾಗಿದ್ದರು. ಇದರಿಂದಾಗಿ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಈಗ ಬಿಜೆಪಿ ಸೇರ್ಪಡೆಯಾಗಿದ್ದು ದೊಡ್ಡನಗೌಡ ಪಾಟೀಲರಿಗೆ ಬೆಂಬಲ ಸೂಚಿಸಿ ನಾಮಪತ್ರ ಹಿಂಪಡೆಯುವುದಾಗಿ ತಿಳಿಸಿದ್ದಾರೆ.

Previous articleಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್
Next articleಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ