ಬಳ್ಳಾರಿ:ರಾಜ್ಯದ 215 ವಿಧಾನ ಸಭಾ ಕ್ಷೇತ್ರಗಳಲ್ಲಿ ಸಿಪಿಐ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೇಷರತ್ ಬೆಂಬಲ ನೀಡಲಿದ್ದೇವೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಸುಂದರೇಶ್ ಹೇಳಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ದೇಶಕ್ಕೆ ಅಪಾಯ ಇದೆ. ಯಾವುದೇ ಕಾರಣಕ್ಕೂ ಮುಂದೆ ಬಿಜೆಪಿ ಅಧಿಕಾರಕ್ಕೆ ಬರಬಾರದು. ಇದೆ ಕಾರಣಕ್ಕೆ ನಾವು ಕಾಂಗ್ರೆಸ್ ಬೆಂಬಲಕ್ಕೆ ನಿಲ್ಲುತ್ತೇವೆ ಎಂದರು.
ರಾಜ್ಯದಲ್ಲಿ 7 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಇನ್ನೆರಡು ಕ್ಷೇತ್ರಗಳ ಪೈಕಿ ಒಂದು ಕಡೆ ಸಿಪಿಎಂ ಮತ್ತೊಂದು ಕಡೆ ರೈತ ಸಂಘದ ಸರ್ವೋದಯ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಲಿದ್ದೇವೆ. ಹೀಗಾಗಿ ಉಳಿದ ಕಡೆ ಮಾತ್ರ ನಾವು ನಮ್ಮ ಬೆಂಬಲವನ್ನು ಕಾಂಗ್ರೆಸ್ ಗೆ ನೀಡಲಿದ್ದೇವೆ ಎಂದರು. ಕೆಪಿಸಿಸಿ ಕಾರ್ಯದರ್ಶಿ ಸತ್ಯ ಪ್ರಕಾಶ್, ವಿಷ್ಣು ಬೋಯಾ ಪಾಟಿ, ಅದಿಮೂರ್ತಿ ಇದ್ದರು.