ಬ್ರಿಜ್‌ ಭೂಷಣ್‌ ವಿರುದ್ಧ ಇಂದೇ ಎಫ್‌ಐಆರ್

0
8
FIR

ದೆಹಲಿ: ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಕುಸ್ತಿಪಟುಗಳ ಕೋರಿಕೆಯ ಮೇರೆಗೆ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು. ಈ ವೇಳೆ ಆರೋಪದ ಮೇಲೆ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿತ್ತು. ಕುಸ್ತಿಪಟುಗಳ ದೂರಿನ ಮೇರೆಗೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಲಾಗಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಇಂದು ಎಫ್‌ಐಆರ್ ದಾಖಲಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

Previous articleರಾಹುಲ್ ಗಾಂಧಿ ಭರ್ಜರಿ ರೋಡ್ ಶೋ
Next articleಮಾಜಿ ಡಿಸಿಎಂ ಪರಮೇಶ್ವರ ತಲೆಗೆ ಕಲ್ಲೇಟು