ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟಾರೆ ಫಲಿತಾಂಶ ಶೇ. 83.89 ಆಗಿದೆ ಎಂದು ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಮಂಡ್ಯ ದ್ವಿತೀಯ ಸ್ಥಾನ, ಹಾಸನ ತೃತೀಯ ಸ್ಥಾನ ಪಡೆದಿವೆ. ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ. ಒಟ್ಟು 23 ಜಿಲ್ಲೆಗಳು A ಗ್ರೇಡ್, 12 ಜಿಲ್ಲೆಗಳು B ಗ್ರೇಡ್ ಪಡೆದಿವೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.