ದಾವಣಗೆರೆ: ದಾವಣಗೆರೆ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹೊರೊಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಐಎಂಎ ಹಾಲ್ ನ 207ರ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಯಾವುದೇ ಆತಂಕವಿಲ್ಲ. ಸೋಲಿನ ಭಯವಿಲ್ಲ. ನಾನು ಗೆಲುವುದರೊಂದಿಗೆ ಜಿಲ್ಲೆಯ ಏಳು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ತಿಳಿಸಿದರು. ಒಂದು ಮತದಿಂದ ಗೆದ್ದರೂ ಗೆಲುವೇ, 50 ಸಾವಿರ ಮತಗಳ ಅಂತರದಿಂದ ಗೆದ್ದರೂ ಗೆಲುವೇ. ಆದರೆ ಗೆಲ್ಲುವುದು ಮುಖ್ಯ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.