ಧಾರವಾಡ: ಕ್ಷೇತ್ರದಲ್ಲಿ ನಾನು ನಿರಂತರ ಅಭಿವೃದ್ಧಿ ಕೆಲಸ ಕಾರ್ಯ ಮಾಡಿದ್ದೇನೆ. ಅದನ್ನು ಗುರುತಿಸಿ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೆಲುವಿನ ನಿರೀಕ್ಷೆ ಇತ್ತು. ನಮ್ಮ ಸರ್ಕಾರದಲ್ಲಿ ಮಂಜೂರಾದ ಅನೇಕ ಯೋಜನೆ ಅನುಷ್ಠಾನ ಮಾಡಬೇಕಿದೆ ಎಂದರು.
ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಲಭಿಸಿ ಸರ್ಕಾರ ರಚನೆಗೆ ಅವಕಾಶ ಲಭಿಸಿದ್ದರೆ ಇನ್ನೂ ಅನುಕೂಲವಾಗುತ್ತಿತ್ತು ಎಂದರು.
























