ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನ

0
11

ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ಯು.ಆರ್. ಸಭಾಪತಿ(71) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಬಡಗುಪೇಟೆಯ ಸ್ವಗೃಹದಲ್ಲಿ ನಿಧನರಾದರು.
1994ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ(ಕೆಸಿಪಿ)ದಿಂದ ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿತ್ತು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜಯ ಸಾಧಿಸಿದ್ದರು. ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮಗಳನ್ನು ಅಗಲಿದ್ದಾರೆ.

Previous articleʻಡೋಂಟ್ ಡಿಸ್ಟರ್ಬ್ʼ ಎಂ.ಬಿ.‌ ಪಾಟೀಲ್‌ಗೆ ಗದರಿದ ಡಿಕೆಶಿ
Next articleರಾಜೀವ್ ಗಾಂಧಿ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ