ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ

0
21

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದೇನೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದಿದೆ ಕೊಟ್ಟ ಭರವಸೆ ಈಡೇರಿಸಲಿ. 3 ತಿಂಗಳು ಅವರಿಗೆ ಸಮಯ ಕೊಡ್ತೀವಿ. 3 ತಿಂಗಳು ಹನಿಮೂನ್ ಸಮಯ ಎಂದರು.

Previous articleನೂತನ ಸಂಸತ್‌ ಭವನ ಉದ್ಘಾಟನೆಗೆ ವಿಪಕ್ಷಗಳಿಂದ ಬಹಿಷ್ಕಾರ
Next articleʼಡಿ.ಕೆ. ಸುರೇಶ್‌ ನನಗೆ ವಾರ್ನಿಂಗ್‌ ಮಾಡಿಲ್ಲ, ನಾನೂ ವಾರ್ನಿಂಗ್‌ ಕೊಟ್ಟಿಲ್ಲʼ